ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 12 ಮಂದಿ ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನಿಂದ ಪದ್ಮಶ್ರೀ ಜೈನ್ ಆಯ್ಕೆಯಾಗಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಥ್ರೋಬಾಲ್ ಪಂದ್ಯದಲ್ಲಿ ದ.ಕ.ಜಿಲ್ಲಾ ಮಹಿಳಾ ಥ್ರೋಬಾಲ್ ತಂಡವು ಪದ್ಮಶ್ರೀ ಅವರ ನೇತೃತ್ವದಲ್ಲಿ ಭಾಗವಹಿಸಲಿದೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಪದ್ಮಶ್ರೀ ಅವರನ್ನು ಶಾಲಾ ಅಧ್ಯಾಪಕ ವರ್ಗ, ಎಸ್.ಡಿ.ಎಮ್.ಸಿ, ಹಾಗೂ ಹಳೆವಿದ್ಯಾರ್ಥಿ ಸಂಘವು ಅಭಿನಂದಿಸಿದೆ.
