Latest News

ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಮೂಡುಬಿದಿರೆ ಪ್ರೆಸ್ ಕ್ಲಬ್ ಗೆ ಭೇಟಿ

Picture of Namma Bedra

Namma Bedra

Bureau Report

ಮೂಡುಬಿದಿರೆ : ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘ (ಪ್ರೆಸ್‌ಕ್ಲಬ್) ವತಿಯಿಂದ ನಿರ್ಮಾಣವಾಗುತ್ತಿರುವ ಪತ್ರಿಕಾಭವನ ಕಾಮಗಾರಿಯನ್ನು ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಭವನದ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಸರ್ಕಾರದಿಂದ ಅನುದಾನ ಒದಗಿಸಲು ಸಹಕರಿಸುವಂತೆ ಕೋರಿ ಮನವಿ ಪತ್ರವನ್ನು ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಕೆ. ವಿ ಪ್ರಭಾಕರ್ ಅವರಿಗೆ ಸಲ್ಲಿಸಿದರು. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮೂಡುಬಿದಿರೆ ಪ್ರೆಸ್‌ಕ್ಲಬ್ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು