Latest News

ಡಾ.ರವೀಂದ್ರ ಶೆಟ್ಟಿ ಅವರಿಗೆ ಸನ್ಮಾನ

Picture of Namma Bedra

Namma Bedra

Bureau Report

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉದ್ಯಮಿ, ರಾಜ್ಯ ಕೃಷರ್ ಓನರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿರುವ ಡಾ.ರವೀಂದ್ರ ಶೆಟ್ಟಿ ಬಜಗೋಳಿ ಅವರನ್ನು ಶಿಕ್ಷಣ ಹಾಗೂ ಸಂಘಟನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.


ರವೀಂದ್ರ ಶೆಟ್ಟಿ ಸಹಿತ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಹಾಗೂ ಕಿರಿಯ ಯತಿ ಸುಶೀಂದ್ರ ತೀರ್ಥರು ಸಾಹಿತ್ಯ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ಕೋಟ ನರೇಂದ್ರ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top