ಮೂಡುಬಿದಿರೆ: ಇಂಜಿನಿಯರ್ ಆತ್ಮಹತ್ಯೆ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಅಲಂಗಾರು ಸಮೀಪದ ದೇವಿಕೃಪಾ ಅಪಾರ್ಟ್ಮೆಂಟ್ ನಲ್ಲಿ ವಾಸ್ಯವ್ಯವಿದ್ದ ಇಂಜಿನಿಯರೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಚಿಕ್ಕಮಗಳೂರಿನವರಾಗಿರುವ ಸುಧಾಕರ ಆಚಾರ್ಯ (45) ಆತ್ಮಹತ್ಯೆ ಮಾಡಿಕೊಂಡವರು.
ಮೂಡುಬಿದಿರೆಯಲ್ಲಿ ಇಂಜಿನಿಯರ್ ವೃತ್ತಿ ಮಾಡಿಕೊಂಡಿದ್ದ ಅವರು ಪ್ಲಾಟ್ ನಲ್ಲಿ ಏಕಾಂಗಿಯಾಗಿ ಇದ್ದರೆನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡು ಎರಡ್ಮೂರು ದಿವಸಗಳಾಗಿರಬೇಕೆಂದು ಶಂಖಿಸಲಾಗಿದೆ. ವಾಸನೆ ಬರುತ್ತಿದ್ದುದನ್ನು ಗಮನಿಸಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.ಆತ್ಮಹತ್ಯೆ ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top