ಕಾರ್ಕಳದ ಕ್ರೈಸ್ತ ಕಿಂಗ್ ಪ.ಪೂ.ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ‘ಮಾಧ್ಯಮಬಿಂಬ’ ಪತ್ರಿಕೆಯಲ್ಲಿ ಸುದೀರ್ಘ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪತ್ರಕರ್ತ ಸತೀಶ್ ಎಚ್.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕ್ರೈಸ್ತಕಿಂಗ್ ಎಜುಕೇಶನ್ ಟ್ರಸ್ಟ್ ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ರಾಂತ ಪತ್ರಕರ್ತ ನಕ್ರೆ ಬಿಪಿನ್ ಚಂದ್ರಪಾಲ್,ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುಹಮ್ಮದ್ ಶರೀಫ್ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ,ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರುಡಾಲ್ಫ್ ಕಿಶೋರ್ ಲೋಬೋ,ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಚಾನೆಲ್ ನ ಮುಖ್ಯಸ್ಥ ವಸಂತ ಕುಮಾರ್, ಪತ್ರಕರ್ತ ಪ್ರದೀಪ್ ನಾಯಕ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕರಾದ ದೀಪಕ್ ಅವರು ಸ್ವಾಗತಿಸಿ ಮೇಘಶ್ರೀ ವಂದಿಸಿದರು. ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.


