ಶಿರ್ತಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಸೂರಜ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.
ಶಿರ್ತಾಡಿಯಲ್ಲಿ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಇವರು ಅಂಬುಲೆನ್ಸ್ ಸೇವೆಯ ಮೂಲಕ ಆಪತ್ಬಾಂಧವನಾಗಿ ಗುರುತಿಸಿಕೊಂಡಿದ್ದಾರೆ.
ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಅವರು ಗೌರವಾಧ್ಯಕ್ಷರಾಗಿರುವ ಸಮಿತಿಗೆ ಗಿರೀಶ್ ಮಕ್ಕಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಮಾನಂದ ದಡ್ಡಲ್ಪಲ್ಕೆ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.








































