ಮೂಡುಬಿದಿರೆ ವಲಯ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ

Picture of Namma Bedra

Namma Bedra

Bureau Report

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಮೂಡುಬಿದಿರೆ ವಲಯದ 15ನೇ ವಾರ್ಷಿಕ ಸಭೆಯು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷ ಪದ್ಮ ಪ್ರಸಾದ್ ಜೈನ್ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ 2025/27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.


ನೂತನ ಅಧ್ಯಕ್ಷರಾಗಿ ನಿತಿನ್ ಬೆಳುವಾಯಿ , ಪ್ರಧಾನ ಕಾರ್ಯದರ್ಶಿಯಾಗಿ ನಮಿತ್ ಬಂಗೇರಾ, ಉಪಾಧ್ಯಕ್ಷರಾಗಿ ರಂಜಿತ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಪದ್ಮನಾಭ ಮಿಜಾರು, ಗೌರವಾಧ್ಯಕ್ಷರಾಗಿ ಉದಯ ಭಟ್, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ ನೀರ್ಕೇರೆ,
ಸಂಘಟನಾ ಕಾರ್ಯದರ್ಶಿಯಾಗಿ ಮಿಥುನ್,
ಕ್ರೀಡಾ ಕಾರ್ಯದರ್ಶಿಗಳಾಗಿ ರೆಹಮಾನ್ ಮತ್ತು ವಿನಯ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಭಾಸ್ಕರ್ ಕೋಟ್ಯಾನ್, ಛಾಯಾ ಕಾರ್ಯದರ್ಶಿಯಾಗಿ ಸತೀಶ್ ಅಳಿಯೂರು,
ಪತ್ರಿಕಾ ಪ್ರತಿನಿಧಿಯಾಗಿ ಪ್ರಮೋದ್ ಪಾಲಡ್ಕ, ವಲಯ ಪ್ರತಿನಿಧಿಗಳಾಗಿ ರಾಜೇಶ್ ಕೆಲ್ಲ ಪುತ್ತಿಗೆ, ಪ್ರಕಾಶ್ ಭಟ್, ಕಾರ್ತಿಕ್ ಗಂಜಿಮಠ, ಸಮೀರ್, ಅನೀತ್ ಜೈನ್, ಜಿಲ್ಲಾ ಕಾರ್ಯಕಾರಿ ಸದಸ್ಯರಾಗಿ ರಾಜೇಶ್ ಅಮೀನ್, ಸುನಿಲ್ ಕೋಟ್ಯಾನ್, ರವಿ ಕೋಟ್ಯಾನ್, ಅಭಯ್ ಕುಮಾರ್ ಜೈನ್,ಇಕ್ಬಾಲ್ ಪುತ್ತಿಗೆ,
ವಿಲ್ಫ್ರೆಡ್ ಮೆಂಡೋನ್ಸಾ ಆಯ್ಕೆಯಾದರು.
ಸಭೆಯ ಅಧ್ಯಕ್ಷತೆಯನ್ನು ವಲಯದ ಅಧ್ಯಕ್ಷ ರಾಜೇಶ್ ಅಮೀನ್ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಸಲಹಾ ಸಮಿತಿ ಸಂಚಾಲಕ ಕರುಣಾಕರ ಕಾನಂಗಿ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ, ಜಿಲ್ಲಾ ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್, ಜಿಲ್ಲಾ ಕಟ್ಟಡ ಸಮಿತಿ ವಲಯ ಪ್ರತಿನಿಧಿ ವಿಲ್ಫ್ರೆಡ್ ಮೆಂಡೋನ್ಸ, ಗೌರವಾಧ್ಯಕ್ಷರಾದ ಸುಂದರ ಸಾಲ್ಯಾನ್, ಸೊಸೈಟಿ ನಿರ್ದೇಶಕರಾದ ರಾಮ ಕೋಟ್ಯಾನ್, ಉಪಾಧ್ಯಕ್ಷ ಮನೋಜ್ ಪುತ್ತಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೋಟ್ಯಾನ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ರಂಜಿತ್ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು. ಸದಸ್ಯರಾದ ಸುರೇಶ್ ಅಂಚನ್ ಧನ್ಯವಾದವಿತ್ತರು. ನಿತಿನ್ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top