ಬೈಕ್ ಸವಾರನ ಮೇಲೆ ಬಿದ್ದ ವಿದ್ಯುತ್ ಕಂಬ !

Picture of Namma Bedra

Namma Bedra

Bureau Report

ಶನಿವಾರ ಸುರಿದ ಭಾರೀ ಗಾಳಿ ಮಳೆಯ ಪರಿಣಾಮ ಬೈಕ್ ಸವಾರನೋರ್ವನ ಮೇಲೆ ವಿದ್ಯುತ್ ಕಂಬ ಬಿದ್ದು ಗಾಯಗೊಂಡ ಘಟನೆ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ನಡೆದಿದೆ.
ನಿಡ್ಡೋಡಿ ನಿವಾಸಿ ವಿನೋದ್ ಅವರು ನಿಡ್ಡೋಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಪಿಗೆ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದ್ದು ವಿನೋದ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top