ಬೆದ್ರ ಸರ್ವೋದಯ ‘ಪಿಲಿ’ ಗಳು ರೆಡಿ !

Picture of Namma Bedra

Namma Bedra

Bureau Report

ಮೂಡುಬಿದಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಸರ್ವೋದಯ ಫ್ರೆಂಡ್ಸ್ ನ ಪಿಲಿಗಳು ರೆಡಿಯಾಗುತ್ತಿದೆ.
ಸರ್ವೋದಯ ಫ್ರೆಂಡ್ಸ್ ನ 17 ನೇ ವರ್ಷದ ಹುಲಿವೇಷದ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ ಎಂ.ಅವರು ಸೋಮವಾರ ಬಿಡುಗಡೆಗೊಳಿಸಿದರು.
ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷ ಗುರು ಒಂಟಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಸರ್ವೋದಯ ಫ್ರೆಂಡ್ಸ್ ಗೌರವಾಧ್ಯಕ್ಷ ರಂಜಿತ್ ಪೂಜಾರಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಮಾರ್, ಕಾರ್ಯದರ್ಶಿ ಗೌತಮ್,ನ್ಯಾಯವಾದಿ ಸುಚಿತಾ,ಗುರು ಅಂಚನ್, ಅಕ್ಷಯ್ ಜೈನ್,ದಿವ್ಯವರ್ಮ ಜೈನ್ ಮತ್ತಿತರರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top