ಮೂಡುಬಿದಿರೆ ಸಮಾಜಮಂದಿರದಲ್ಲಿ ನಡೆಯುತ್ತಿರುವ 62 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಪ್ರತಿದಿನ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ರಂಗ ನಿರ್ದೇಶಕ ಜೀವನರಾಮ್ ಸುಳ್ಯ ಅವರು ಉದ್ಘಾಟಿಸಿದರು.
ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಗಣೇಶೋತ್ಸವ ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ, ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಹರೀಶ್ ಎಂ.ಕೆ,ರಾಜಾರಾಮ್ ನಾಗರಕಟ್ಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






