ಮೂಡುಬಿದಿರೆ ಗಣೇಶೋತ್ಸವದ ಕೊನೆಯ ದಿನವಾಗಿರುವ ನಾಳೆ ವಿಸರ್ಜನಾ ಮೆರವಣಿಗೆ ನಡೆಯಲಿರುವುದರಿಂದ ಭಾರೀ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದ್ದು , ಹುಲಿಕುಣಿತ ,ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಬೆಳಿಗ್ಗೆಯಿಂದ ಪೇಟೆಗೆ ಬರುವ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ವಿನಂತಿಸಿದ್ದಾರೆ.
ಮಧ್ಯಾಹ್ನ ಎರಡು ಗಂಟೆಯ ನಂತರ ಸಂಚಾರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದ್ದು ಮೂಡುಬಿದಿರೆ ಪೇಟೆಗೆ ವಾಹನಗಳನ್ನು ನಿರ್ಬಂಧಿಸಲಾಗಿದೆ.
ಸಾರ್ವಜನಿಕರು ತಮ್ಮ ವಾಹನಗಳನ್ನು ನಗರಕ್ಕೆ ತಾರದೆ ಮೂಡುಬಿದಿರೆಯ ಬೈಪಾಸ್ ರಸ್ತೆಯಲ್ಲಿ ಸಂಚರಿಸುವಂತೆ ಅವರು ವಿನಂತಿಸಿದ್ದಾರೆ.













