ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

Picture of Namma Bedra

Namma Bedra

Bureau Report

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಫೋಟೋ ಬಳಸಿ ಕೋಮು ಪ್ರಚೋದನೆ ರೀತಿಯಲ್ಲಿ ಫೇಸ್ ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಮೂಡುಬಿದಿರೆ ಪಿ.ಎಸ್.ಐ ಕೃಷ್ಣಪ್ಪ ಅವರ ದೂರಿನಂತೆ ಮೂಡುಬಿದಿರೆ ಠಾಣೆಯಲ್ಲಿ ಸ್ವಯಂ ಪ್ರಕರಣ ದಾಖಲಾಗಿತ್ತು.


ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಫೋಟೋ ಬಳಸಿ ‘ ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ,ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸಿವುದಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಗ್ಡೆ ಅವರು ಹಂಚಿಕೊಂಡಿದ್ದರು.
ಅವರನ್ನು ಬಂಧಿಸಿರುವ ಮೂಡುಬಿದಿರೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top