ತಾಲೂಕು ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ

Picture of Namma Bedra

Namma Bedra

Bureau Report

ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಚಿವ ಜೆ.ಅಭಯಚಂದ್ರ ಅವರು ಉದ್ಘಾಟಿಸಿದರು.
ಮೂಡುಬಿದಿರೆ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬೆಳುವಾಯಿ ಸೀತಾರಾಮ ಆಚಾರ್ಯ ಅವರು ವಿಶ್ವಕರ್ಮ ಪೂಜೆ, ವಿಶ್ವಕರ್ಮ ಜಯಂತಿಯ ಹಿನ್ನೆಲೆಯನ್ನು ವಿವರಿಸಿದರು.
ಪುರಸಭಾಧ್ಯಕ್ಷೆ ಜಯಶ್ರೀ ಕೇಶವ,ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ,ಪೊಲೀಸ್ ಉಪನಿರೀಕ್ಷಕ ನವೀನ್, ಡಿ.ಟಿ.ಬಾಲಚಂದ್ರ ಅತಿಥಿಗಳಾಗಿ ಭಾಗವಹಿಸಿದ್ದರು.
ಕಂದಾಯ ನಿರೀಕ್ಷಕ ಮಂಜುನಾಥ್ ಸಹಿತ ಸಿಬ್ಬಂದಿವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಿಟಿ ರಾಮ್ ಅವರು ಸ್ವಾಗತಿಸಿ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top