ಪಿಜತ್ತಕಟ್ಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುರೇಶ್ ಅಂಚನ್

Picture of Namma Bedra

Namma Bedra

Bureau Report

ಮರೋಡಿ ಗ್ರಾಮದ ಪಿಜತ್ತಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹೊಟೇಲ್ ಉದ್ಯಮಿ, ಸಮಾಜ ಸೇವಕ ಸುರೇಶ್ ಅಂಚನ್ ಅಟ್ಲಬೆಟ್ಟು ಅವರು ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ ಬಂಗೇರ ಹಜಂಕಾನಿ ಹಾಗೂ ಕೋಶಾಧಿಕಾರಿಯಾಗಿ ನಾರಾಯಣ ಸಾಲ್ಯಾನ್ ಮೇಗಿನಹಿತ್ತಿಲು ಅವರು ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುರೇಶ್ ಅಂಚನ್ ಅವರು ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿದ್ದು ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top