ಬೆಳ್ತಂಗಡಿ ಸಿವಿಲ್ ಇಂಜಿನಿಯರ್ಸ್ ಪದಪ್ರದಾನ: ಜೀವನ್ ಕೆ.ಶೆಟ್ಟಿ ಅವರಿಗೆ ಸನ್ಮಾನ

Picture of Namma Bedra

Namma Bedra

Bureau Report

ಬೆಳ್ತಂಗಡಿ ತಾಲೂಕು ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ 2025-27 ನೇ ಸಾಲಿನ ಪದಪ್ರದಾನ ಸಮಾರಂಭವು ಉಜಿರೆಯ ಏಶಿಯನ್ ಪರ್ಲ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
‌‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಲ್ಕಿ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಜೀವನ್ ಕೆ.ಶೆಟ್ಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ ಜಿಲ್ಲೆಯ ಪ್ರತೀ ತಾಲೂಕುಗಳಲ್ಲೂ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ಇದೆ,ಬೆಳ್ತಂಗಡಿ ಅಸೋಸಿಯೇಷನ್ ಸಾಮಾಜಿಕ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕ ಸಹಾಯ ಮಾಡುತ್ತಿರುವುದು ಶ್ಲಾಘನೀಯ, ವಿದ್ಯೆಯ ಜೊತೆಗೆ ಸಾಮಾಜಿಕ ಜವಾಬ್ದಾರಿ, ಸಮಾಜಕ್ಕೆ ಕೊಡಬೇಕಾದ ಕೊಡುಗೆಗಳನ್ನು ನೀಡುತ್ತಾ ಬಂದರೆ ನಮ್ಮ ವಿದ್ಯೆಗೆ ಗೌರವ ಕೊಟ್ಟಂತಾಗುತ್ತದೆ’ ಎಂದರು.
ಎನ್ಐಟಿಕೆ ಕಾಲೇಜಿನ ನಿವೃತ್ತ ಪ್ರೊಫೆಸರ್ ಕೆ.ಎಸ್.ಬಾಬು ನಾರಾಯಣ, ಬೆಳ್ತಂಗಡಿ ಇಂಜಿನಿಯರ್ಸ್ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ಜಗದೀಶ್ ಪ್ರಸಾದ್, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top