ಕೆಲ್ಲಪುತ್ತಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಗೋಸಿರಿ’ ಯ ಉದ್ಘಾಟನೆ ಮಂಗಳವಾರ ನಡೆಯಿತು.
ದ.ಕ.ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ನೂತನ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಮಾಜಿ ಸಚಿವರಾದ ಕೆ.ಅಭಯಚಂದ್ರ ಅವರು ಸಭಾಂಗಣವನ್ನು ಉದ್ಘಾಟಿಸಿದ್ದು ಗೋದಾಮನ್ನು ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್.ಕೋಟ್ಯಾನ್ ಉದ್ಘಾಟಿಸಿದರು.ಒಕ್ಕೂಟದ ನಿರ್ದೇಶಕರಾದ ಸುಚರಿತ ಶೆಟ್ಟಿ ಅವರು ನಾಮಫಲಕವನ್ನು ಉದ್ಘಾಟಿಸಿದರು.

ಕೆಲ್ಲಪುತ್ತಿಗೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಪ್ರಶಾಂತ್ ಎಸ್.ಅಮೀನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಒಕ್ಕೂಟದ ನಿರ್ದೇಶಕರಾದ ಸುಧಾಕರ ರೈ,ನಂದರಾಮ ರೈ,ಸವಿತಾ ಶೆಟ್ಟಿ, ಬೆಳುವಾಯಿ ವ್ಯ.ಸೇ.ಸ.ಸಂಘದ ಅಧ್ಯಕ್ಷರಾದ ಭಾಸ್ಕರ ಎಸ್.ಕೋಟ್ಯಾನ್,ದರೆಗುಡ್ಡೆ ಪಂಚಾಯತ್ ಅಧ್ಯಕ್ಷ ಅಶೋಕ್ ಶೆಟ್ಟಿ,ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಶ್ಚಂದ್ರ ಚೌಟ,ಧರ್ಮಸ್ಥಳ ಗ್ರಾ.ಯೋ.ಯೋಜನಾಧಿಕಾರಿ ಯಶೋಧ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಘದ ಉಪಾಧ್ಯಕ್ಷರಾದ ಸುರೇಂದ್ರ ಅಜ್ರಿ ಸ್ವಾಗತಿಸಿ ನಿರ್ದೇಶಕ ಗೋಪಾಲ ಪೂಜಾರಿ ವಂದಿಸಿದರು.ಗಣೇಶ್ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಭರತ್ ಕುಮಾರ್ ಸಹಕರಿಸಿದರು.






