ಕೃಷಿ ಕ್ಷೇತ್ರದ ಸಾಧನೆಗಾಗಿ ಈಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕಡಂದಲೆ ಸಂತೋಷ್ ಶೆಟ್ಟಿ ಅವರಿಗೆ ಶನಿವಾರ ಬೆಳಿಗ್ಗೆ ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಹರೀಶ್ ಕುಮಾರ್, ಮಿಥುನ್ ರೈ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







































