ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ವತಿಯಿಂದ ‘ವಿಶೇಷ ಚೇತನ ಮಕ್ಕಳ ಹಬ್ಬ’ ಕಾರ್ಯಕ್ರಮವು ನ.7 ರಂದು ಬೆಳಿಗ್ಗೆ 11 ಗಂಟೆಗೆ ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಡಾ.ಜಗನ್ನಾಥ ಶೆಟ್ಟಿ ಅವರು ತಿಳಿಸಿದ್ದಾರೆ.
ಜಗನ್ನಾಥ ಶೆಟ್ಟಿ ಚಾವಡಿಮನೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕಿನ್ನಿಗೋಳಿ ಕೊಸಸಾಂವ್ ಚರ್ಚ್ ನ ಧರ್ಮಗುರುಗಳಾದ ರೆ.ಫಾ.ಜೋಕಿಮ್ ಫೆರ್ನಾಂಡಿಸ್ ಉದ್ಘಾಟಿಸಲಿದ್ದಾರೆ.
ಮುಲ್ಕಿ ಸೀಮೆ ದುಗ್ಗಣ್ಣ ಸಾವಂತ ಅರಸರು, ಕಿನ್ನಿಗೋಳಿ ‘ಯುಗಪುರುಷ’ ಸಂಪಾದಕರಾದ ಭುವನಾಭಿರಾಮ ಉಡುಪ,ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ನಿಗಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ ಹಾಗೂ ಸೈಂಟ್ ಮೇರಿಸ್ ಸ್ಪೆಷಲ್ ಸ್ಕೂಲ್ ನ ಪ್ರಾಂಶುಪಾಲರಾದ ರೇಶ್ಮಾ ಮಾರ್ಟಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.
ಸಂಸ್ಥೆಯ ಟ್ರಸ್ಟಿಗಳು,ಮಕ್ಕಳ ಪೋಷಕರು, ಶಿಕ್ಷಕಿಯರು ಹಾಗೂ ಅತಿಥಿಗಳ ಪಾಲ್ಗೊಳ್ಳುವಿಕೆಯಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.





