ಸುಮಾರು ಒಂದು ಲಕ್ಷ ಸ್ಕ್ವೇರ್ ಫೀಟ್ ನಷ್ಟು ವಿಸ್ತಾರದಲ್ಲಿ, ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ನೂತನ ಕಟ್ಟಡ ‘ ಎಕ್ಸಲೆಂಟ್ ಶೈಕ್ಷಣಿಕ ಕಟ್ಟಡ’ ದ ಉದ್ಘಾಟನೆ ನ.7 ರಂದು ಸಂಜೆ ಆಂದ್ರಪ್ರದೇಶದ ರಾಜ್ಯಪಾಲರಾದ ಎಸ್.ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ ಎಂದು ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮಂಗಳವಾರ ಬೆಳಿಗ್ಗೆ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ‘ಸುಸಜ್ಜಿತವಾದ ಕಂಪ್ಯೂಟರ್ ಲ್ಯಾಬ್, 52 ವಿಶಾಲವಾದ ಕೊಠಡಿಗಳು, ಡಬಲ್ ಕ್ಲಾಸ್ ರೂಮುಗಳು,ಟೆಕ್ನೊ ತರಗತಿಗಳು,ಗಾಳಿ,ಬೆಳಕುಗಳಿಂದ ನಿಸರ್ಗದ ವಾತಾವರಣ ಕಲ್ಪಿಸಿಕೊಡುವ ,ಅಧ್ಯಯನಕ್ಕೆ ಪೂರಕವಾದ ,ಸುಂದರವಾದ ಹಾಗೂ ಆಕರ್ಷಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡವು ವಿದ್ಯಾರ್ಥಿಗಳ ಇಂದಿನ ಅಗತ್ಯಗಳಿಗೆ ತೆರೆದುಕೊಂಡಂತೆ ನಿರ್ಮಾಣವಾಗಿದೆ ಎಂದವರು ಮಾಹಿತಿ ನೀಡಿದರು.

ಯುವರಾಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.ಮಾಜಿ ಸಚಿವ ಕೆ.ಅಭಯಚಂದ್ರ, ಸಂಸದ ಬ್ರಿಜೇಶ್ ಚೌಟ,ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್ ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ ಎಂದವರು ಮಾಹಿತಿ ನೀಡಿದರು.
ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ,ಫಲಿತಾಂಶ ಮತ್ತು ಸಂಸ್ಥೆಯ ಸಮಗ್ರ ಮಾಹಿತಿಯನ್ನು ಅವರು ವಿವರಿಸಿದರು.
ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್,ಸಂಪತ್ ಕುಮಾರ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.










