ಕಳೆದ ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸತೀಶ್ ಕೆ.ಕಾಶಿಪಟ್ಣ ಅವರು ” ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ .
ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಅವರು ಕಳೆದ 25 ವರ್ಷಗಳಿಂದ ರಾಜಕೀಯ, ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿರುವುದಲ್ಲದೆ ಸಾಮಾಜಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ಬೆಳ್ತಂಗಡಿ, ಮೂಡುಬಿದಿರೆ ತಾಲೂಕುಗಳಲ್ಲಿ ಜನಪ್ರಿಯರಾಗಿ ಜಿಲ್ಲೆಯ ಗಮನಸೆಳೆದಿದ್ದಾರೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವು ನ.14 ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.






