ಟೂರಿಸ್ಟ್ ವಾಹನ, ರಿಕ್ಷಾ ಹೊಂದಿದವರ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ಮಾಡುವವರ,ಪಂಚಾಯತ್ ಸಿಬ್ಬಂದಿಗಳ ಬಿಪಿಎಲ್ ಕಾರ್ಡನ್ನು ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದೆಂದು ಮೂಡುಬಿದಿರೆ ತಾಲೂಕು ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆಹಾರ ನಿರೀಕ್ಷಕರಿಗೆ ಸೂಚಿಸಿದ್ದಾರೆ.
ಮೂಡುಬಿದಿರೆ ತಾಲೂಕು ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಯೋಜನಾ ಕಚೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.
ಬೆಳುವಾಯಿಯ ಫ್ಲೈ ಓವರ್ ಕೆಳಗಡೆ ಎಲ್ಲಾ ಸರಕಾರಿ ಬಸ್ಸುಗಳನ್ನು ನಿಲುಗಡೆಗೊಳಿಸುವ ವ್ಯವಸ್ಥೆಯನ್ನು ಮಾಡಬೇಕೆಂದೂ ಅವರು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸುನಂದಾ ಜೈನ್ ಮತ್ತಿತರರು ಈ ಸಭೆಯಲ್ಲಿ ಭಾಗವಹಿಸಿದ್ದರು.






