ಅಳಿಯೂರು ಕಾಲೇಜಿನಲ್ಲಿ ಪೋಷಕರ ಹಾಗೂ ಉಪನ್ಯಾಸಕರ ಮಹಾಸಭೆ

Picture of Namma Bedra

Namma Bedra

Bureau Report

ಅಳಿಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪೋಷಕರ ಹಾಗೂ ಉಪನ್ಯಾಸಕರ ಮಹಾಸಭೆಯ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಚಂದ್ರಶೇಖರ ಅವರು ವಹಿಸಿದ್ದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ಬಿ.ಅಳಿಯೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಕಲಿಕೆಯನ್ನು ಉತ್ತಮಪಡಿಸಲು ಇಲಾಖೆಯಿಂದ ಹಮ್ಮಿಕೊಂಡಿರುವ ಕಲಿಕಾ ಕಾರ್ಯಕ್ರಮಗಳು,ಸರಕಾರದಿಂದ ನೀಡುತ್ತಿರುವ ಪ್ರೋತ್ಸಾಹದಾಯಕ ಯೋಜನೆಗಳು,ವಿದ್ಯಾರ್ಥಿಗಳ ಆರೋಗ್ಯ,ಪೋಷಣೆ ಮತ್ತು ಕಲಿಕಾ ಪ್ರಗತಿಯಲ್ಲಿ ಪೋಷಕರ ಜವಾಬ್ದಾರಿ ಮತ್ತು ಭಾಗವಹಿಸುವಿಕೆಯ ಅರಿವು ಮೂಡಿಸುವುದು ,ವಿದ್ಯಾರ್ಥಿಗಳ ಹಾಜರಾತಿ ಮತ್ತು ಶೈಕ್ಷಣಿಕ ಪ್ರಗತಿಯನ್ನು ಪೋಷಕರೊಂದಿಗೆ ಹಂಚಿಕೊಳ್ಳಲಾಯಿತು.
ಉಪನ್ಯಾಸಕರಾದ ಮಮತಾ ಅವರು ಸ್ವಾಗತಿಸಿ ಶಾರದಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅರುಣಾ ಅವರು ವಂದಿಸಿದರು. ರಂಜಿತಾ ಕಾರ್ಯಕ್ರಮ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top