ಅಳಿಯೂರಿನಲ್ಲಿಂದು ಪ್ರಕೃತಿ ಚಿಕಿತ್ಸೆ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ

Picture of Namma Bedra

Namma Bedra

Bureau Report

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳು, ಉಜಿರೆ ಇವರ ವತಿಯಿಂದ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರವು ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಅಳಿಯೂರಿನ ಹೇಮಾ ಸಭಾ ಭವನದಲ್ಲಿ ನಡೆಯಲಿದೆ.
ಯೋಗ ಮತ್ತು ಪ್ರಕೃತಿ ಚಿಕಿತ್ಸೆ ನೈಸರ್ಗಿಕ ಚಿಕಿತ್ಸಾ ವ್ಯವಸ್ಥೆಯಾಗಿದ್ದು ಇದರಲ್ಲಿ ಯಾವುದೇ ರಾಸಾಯನಿಕ ಜನ್ಯ ಔಷಧಿಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ಈ ವಿಶಿಷ್ಟ ಚಿಕಿತ್ಸಾ ವಿಧಾನವು ದೇಹವನ್ನು ಒಳಗಿನಿಂದ ಬಲಪಡಿಸುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಗತ್ಯವಿರುವಲ್ಲಿ ಜೀವನಶೈಲಿಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಮತ್ತು ಆ ಮೂಲಕ ನಮ್ಮ ದೇಹವು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುವ ಸುರಕ್ಷಿತ ಮತ್ತು ನೈಸರ್ಗಿಕ ಮಾರ್ಗವನ್ನು ನೀಡುತ್ತದೆ.
ಈ ಶಿಬಿರದಲ್ಲಿ ರಕ್ತದೊತ್ತಡ(ಬಿಪಿ) ಮತ್ತು ಮಧುಮೇಹ (ಶುಗರ್) ತಪಾಸಣೆಗಳನ್ನು ಉಚಿತವಾಗಿ ಮಾಡುವುದಲ್ಲದೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆಗೆ ಅವಕಾಶವಿದೆ ಎಂದು ಎಂದು ಸಂಘಟಕರು ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top