ಮೂಡುಬಿದಿರೆಯ ಮಹಾವೀರ ಕಾಲೇಜು ಬಳಿ ನೂತನವಾಗಿ ನಿರ್ಮಾಣಗೊಂಡು ಭಾನುವಾರ ಬೆಳಿಗ್ಗೆ ಉದ್ಘಾಟನೆಗೊಂಡಿರುವ ಜಾವೆದ್ ಶೇಖ್ ಮಾಲಕತ್ವದ ‘ಗ್ಯಾಲಕ್ಸಿ ಅಪಾರ್ಟ್‌ಮೆಂಟ್’ಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಶುಭಹಾರೈಸಿದರು.


ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್,ಆಳ್ವಾಸ್ ನ ವಿವೇಕ್ ಆಳ್ವ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್,ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯರಾದ ರೂಪಾ ಸಂತೋಷ್ ಶೆಟ್ಟಿ,ಪ್ರಸಾದ್ ಕುಮಾರ್,ಸುರೇಶ್ ಕೋಟ್ಯಾನ್,ಚಿತ್ರನಟ ಭೋಜರಾಜ್ ವಾಮಂಜೂರು,ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮೂಡಾ ಸದಸ್ಯ ಶೇಖರ್ ಬೊಳ್ಳಿ, ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ,ಪತ್ರಕರ್ತ ಅಶ್ರಫ್ ವಾಲ್ಪಾಡಿ, ಪಂಚರತ್ನ ತಿಮ್ಮಯ್ಯ ಶೆಟ್ಟಿ, ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಚಿತ್ರ ನಿರ್ದೇಶಕ ಸುರೇಶ್ ಅಂಚನ್, ನಾಸಿರ್ ಸಾಮಣಿಗೆ, ಕೆ.ಪಿ.ಜಗದೀಶ್ ಅಧಿಕಾರಿ, ಮತ್ತಿತರರು ಭಾಗವಹಿಸಿ ಶುಭ ಹಾರೈಸಿದರು.
ವಿಶ್ವನಾಥ ಶೆಟ್ಟಿ ,ಅಝ್ವೀರ್, ಮುಜೀಬ್,ರಾಜೇಶ್ ಕೋಟೆಗಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.
ಸಂಸ್ಥೆಯ ಮುಖ್ಯಸ್ಥರಾದ ಜಾವೆದ್ ಶೇಖ್ ಹಾಗೂ ಡಾ.ಪರ್ವೀನ್ ಜಾವೆದ್ ಶೇಖ್ ಅವರು ಭಾಗವಹಿಸಿದವರನ್ನು ಸ್ವಾಗತಿಸಿ,ಸರ್ವರ ಸಹಕಾರ ಕೋರಿ ವಂದಿಸಿದರು.ಶಾಹಿಲ್ ಬೆದ್ರ ಕಾರ್ಯಕ್ರಮ ನಿರೂಪಿಸಿದರು.







































