ಅಬ್ದುಲ್ ಜಬ್ಬಾರ್ ಉಸ್ತಾದ್ ಮೆಮೋರಿಯಲ್ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್,ಕೋಟೆಬಾಗಿಲು ಇದರ ನೂತನ ಕಟ್ಟಡದ ಉದ್ಘಾಟನೆ ಹಾಗೂ ದ.ಕ.ಜಿಲ್ಲಾ ಮಟ್ಟದ ಅಲ್ ಬಿರ್ ಶಾಲೆಗಳ ‘ ಕಿಡ್ಸ್ ಫೆಸ್ಟ್’ ಕಾರ್ಯಕ್ರಮ ಜ.4 ರಂದು ಬೆಳಿಗ್ಗೆ 8-30 ರಿಂದ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ಸಲಾಮ್ ಬೂಟ್ ಬಝಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಿಗ್ಗೆ 8-30 ಕ್ಕೆ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಬೆಳಿಗ್ಗೆ 9 ಗಂಟೆಗೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಅಸ್ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ಅವರು ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಅಲ್ ಬಿರ್ ಸ್ಕೂಲ್ಸ್ ನ ಜನರಲ್ ಕನ್ವೀನರ್ ಹಾಗೂ ಸಮಸ್ತ ಕೇಂದ್ರ ಮುಶಾವರ ಜೊತೆ ಕಾರ್ಯದರ್ಶಿ ಶೈಖುನಾ ಉಮರ್ ಫೈಝಿ ಮುಕ್ಕಂ ಅವರು ಉದ್ಘಾಟಿಸಲಿದ್ದು ದ.ಕ.ಜಿಲ್ಲಾ ಖಾಝಿಯವರಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ದುವಾ ಪ್ರಾರ್ಥನೆಗೈಯಲಿದ್ದಾರೆ.
ಸಮಸ್ತ ಕೇಂದ್ರ ಮುಶಾವರ ಸದಸ್ಯರುಗಳಾದ ಶೈಖುನಾ ಅಬ್ದುಲ್ ಖಾದರ್ ಅಲ್ ಖಾಸಿಮಿ ಬಂಬ್ರಾಣ,ಶೈಖುನಾ ಉಸ್ಮಾನುಲ್ ಫೈಝಿ ತೋಡಾರ್,ಅಜುಮ್ ಅಲ್ ಬಿರ್ರ್ ಇಂಟರ್ನ್ಯಾಷನಲ್ ಸ್ಕೂಲ್, ಮೂಡುಬಿದಿರೆಯ ಗೌರವಾಧ್ಯಕ್ಷರಾದ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಯ್ಯಿದ್ ಅಮೀರ್ ತಂಙಳ್ ಕಿನ್ಯ,ಸಯ್ಯಿದ್ ಅಕ್ರಮ್ ಅಲಿ ತಂಙಳ್ ಅಂಗರಕರ್ಯ,ಶೈಖುನಾ ಮುಹಮ್ಮದ್ ಅಝ್ಹರ್ ಫೈಝಿ ಬೊಳ್ಳೂರು,ರಫೀಕ್ ಹುದವಿ ಕೋಲಾರಿ,ಇರ್ಷಾದ್ ದಾರಿಮಿ ಮಿತ್ತಬೈಲ್,ಅಲ್ ಬಿರ್ ಆಡಳಿತ ನಿರ್ದೇಶಕರಾದ ಡಾ.ಕೆ.ಪಿ.ಮುಹಮ್ಮದ್, ಅಲ್ ಬಿರ್ರ್ ದ.ಕ.ಜಿಲ್ಲಾ ಕೋರ್ಡಿನೇಟರ್ ಅಬ್ದುಲ್ ಶುಕೂರ್ ದಾರಿಮಿ ಕರಾಯ, ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್,ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಾಜಿ ಸಚಿವರಾದ ಕೆ.ಅಭಯಚಂದ್ರ,ಶಾಸಕ ಉಮಾನಾಥ ಕೋಟ್ಯಾನ್, ಕೆಪಿಸಿಸಿ ಕಾರ್ಯದರ್ಶಿಗಳಾದ ಮಿಥುನ್ ರೈ,ಇನಾಯತ್ ಆಲಿ,ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಜಿಲ್ಲೆಯ 16 ಅಲ್ ಬಿರ್ರ್ ಶಾಲೆಗಳ ವಿದ್ಯಾರ್ಥಿಗಳ ವಿವಿಧ ಸ್ಪರ್ಧೆ ‘ ಕಿಡ್ಸ್ ಫೆಸ್ಟ್’ ನಡೆಯಲಿದೆ ಎಂದವರು ತಿಳಿಸಿದರು.
ಅಲ್ ಬಿರ್ರ್ ಶಾಲೆಯ ಅಧ್ಯಕ್ಷ ಉಸ್ಮಾನ್ ಅಬ್ದುಲ್ಲಾ ಸೂರಿಂಜೆ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಾಲಿಕ್,ಟ್ರಸ್ಟಿ ಅಲ್ತಾಫ್ ಗಂಟಾಲ್ಕಟ್ಟೆ, ಸ್ವಾಗತ ಸಮಿತಿಯ ಕನ್ವಿನರ್ ಅಬ್ದುಲ್ ರಝಾಕ್ ಮದನಿ,ವೈಸ್ ಕನ್ವೀನರ್ ಅಬ್ದುಲ್ ಗಫೂರ್ ಹಾಗೂ ಸದಸ್ಯ ಲಿಕಾಯತ್ ಆಲಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.










