ಸಮಾಜಸೇವಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರಿಗೆ ಚೌಟರಾಣಿ ಅಬ್ಬಕ್ಕ ಪ್ರೇರಣಾ ಗೌರವ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಮಣ್ಣಿನ ಮಗಳು ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಜವನೆರ್ ಬೆದ್ರ ಫೌಂಡೇಶನ್ (ರಿ.) ವತಿಯಿಂದ ನೀಡಲಾಗುವ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರದ ಗೌರವಕ್ಕೆ ಆರದಿರಲಿ ಬದುಕು ಆರಾಧನ ತಂಡದ ಸಂಸ್ಥಾಪಕಿ, ಕಳೆದ 8 ವರ್ಷಗಳಿಂದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಭಟ್ ನಿಡ್ಡೋಡಿ ಪಾತ್ರರಾಗಿದ್ದಾರೆ.
ಚೌಟರ ಅರಮನೆಯ ಕುಲದೀಪ ಅವರು ಪದ್ಮಶ್ರೀ ಭಟ್ ನಿಡ್ಡೋಡಿ ಅವರಿಗೆ ಪ್ರೇರಣಾ ಪತ್ರವನ್ನು ನೀಡಿ ಗೌರವಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top