ಅಂಚೆ ಇಲಾಖೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ-ಪ್ರವೀಣ್ ಪೂಜಾರಿ. ಇರುವೈಲಿನಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಾಣಿ ತಿದ್ದುಪಡಿ ಶಿಬಿರ

Picture of Namma Bedra

Namma Bedra

Bureau Report

ಮೂಡುಬಿದಿರೆ: ಫ್ರೆಂಡ್ಸ್ ಕ್ಲಬ್ ರಿ ಇರುವೈಲು ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಾಣಿ ತಿದ್ದುಪಡಿ ಮತ್ತು ತಿದ್ದುಪಡಿ ಶಿಬಿರವು ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಫ್ರೆಂಡ್ಸ್ ಕ್ಲಬ್ ಹಾಲ್‌ನಲ್ಲಿ ಭಾನುವಾರ ನಡೆಯಿತು.
ಕಾರ್ಯಕ್ರಮವನ್ನು ಇರುವೈಲು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಲಲಿತ ಮುಗೇರ ದೀಪ ಬೆಳಗಿಸಿ ಉದ್ಘಾಟಿಸಿದರು.
ಕೆಡಿಪಿ ಸದಸ್ಯ ಪ್ರವೀಣ್ ಪೂಜಾರಿ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಫ್ರೆಂಡ್ಸ್ ಕ್ಲಬ್ ಹಾಗೂ ಭಾರತೀಯ ಅಂಚೆ ಇಲಾಖೆ ಜತೆಗೂಡಿ ಆಧಾರ್ ತಿದ್ದುಪಡಿ, ಆರೋಗ್ಯ ವಿಮೆ, ಅಪಘಾತ ವಿಮೆಯ ಪ್ರಯೋಜನವನ್ನು ಪಡೆಯಲು ಜನರಿದ್ದಲ್ಲಿಯೇ ಬಂದು ಅಂಚೆ ಇಲಾಖೆಯ ಯೋಜನೆಗಳನ್ನು ತಲುಪಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
ಅಂಚೆ ಮಾರುಕಟ್ಟೆ ಇಲಾಖೆಯ ಕಾರ್ಯನಿರ್ವಾಹಕ ಸುಭಾಷ್ ಪಿ ಸಾಲ್ಯಾನ್ ಮಾತನಾಡಿ, ಕೇಂದ್ರ ಸರ್ಕಾರ ಬೇರೆ ಬೇರೆ ರೀತಿಯ ಯೋಜನೆಗಳನ್ನು ಅಂಚೆ ಇಲಾಖೆಯಲ್ಲಿ ಜಾರಿಗೆ ತಂದಿದೆ. ಆ ಎಲ್ಲಾ ಯೋಜನೆಗಳು ಒಂದೇ ಸೂರಿನಡಿಯಲ್ಲಿ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಹೆಚ್ಚಾಗಿ ಹಳ್ಳಿಗಳಲ್ಲಿ ಅಂಚೆ ಇಲಾಖೆಯ ಯೋಜನೆಗಳನ್ನು ಹಳ್ಳಿಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಗ್ರಾಮದ ಜನರು ಪ್ರಯೋಜನವನ್ನು ಪಡೆದುಕೊಂಡು ಉಳಿದವರಿಗೂ ಮಾಹಿತಿಯನ್ನು ನೀಡಿ ಎಂದರು.
ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ರಾಜೇಶ್ ಪೂಜಾರಿ ದೇವರಗುಡ್ಡೆ, ಹೊಸಬೆಟ್ಟು ಸಹಕಾರಿ ಸಂಘದ ಅಧ್ಯಕ್ಷ ರಾಜೇಶ್ ಪೂಜಾರಿ ಕಾಳೂರು, ಇರುವೈಲು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷೆ ಸುಜಾತ ಜೆ ಶೆಟ್ಟಿ, ಸದಸ್ಯರಾದ ಪೂವಪ್ಪ ಸಾಲ್ಯಾನ್, ಪ್ರದೀಪ್ ಶೆಟ್ಟಿ, ದೀಪಾ ದಿನೇಶ್, ಯಶೋಧರ್ ಪೂಜಾರಿ ಕೆ, ದಿನೇಶ್ ಪಂಜ, ಕಿಶೋರ್ ಶೆಟ್ಟಿ, ಶೇಖರ್ ಪೂಜಾರಿ, ನಾರಾಯಣ ಪೂಜಾರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top