ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,ದ.ಕ.ಜಿಲ್ಲೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಶಿತಾ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಬಹುಮಾನ ವಿಜೇತೆ ಅಂಶಿತಾಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ,ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಿದರು.
ಅಂಶಿತಾ ಮೂಡುಬಿದಿರೆ ಪುರಸಭಾ ಸದಸ್ಯ ರಾಜೇಶ್ ನಾಯ್ಕ್-ನಳಿನಾಕ್ಷಿ ದಂಪತಿಯ ಪುತ್ರಿ.
