ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಇಂದು (8-2-2026) ನಡೆದಿರುವ 2025 – 26ನೇ ಸಾಲಿನ ರಾಜ್ಯಮಟ್ಟದ (state level ) ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜ್ಯೋತಿನಗರ ಇಲ್ಲಿನ ವಿದ್ಯಾರ್ಥಿನಿ ಅರ್ಪಿತಾ ಸ್ಪರ್ಧಿಸಿ ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿರುತ್ತಾರೆ. ಶಾಲಾ ಕೀರ್ತಿಯನ್ನು ಬಾನೆತ್ತರಕ್ಕೆ ಏರಿಸಿದ ನೆಚ್ಚಿನ ಅರ್ಪಿತಾಳಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ, ವಿದ್ಯಾರ್ಥಿ ವೃಂದ, SDMC ಅಧ್ಯಕ್ಷರು ಮತ್ತು ಸರ್ವಸದಸ್ಯರು, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಹಳೆವಿದ್ಯಾರ್ಥಿಗಳು, ಇಲಾಖಾ ಅಧಿಕಾರಿಗಳು, ಪೋಷಕರು, ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.
ಇದೇ ರೀತಿಯ ಛಲ, ಪರಿಶ್ರಮ ಜೀವನದಲ್ಲಿ ಮುoದುವರೆದು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಆಗಲಿ ಎಂದು ಹಾರೈಸಿದ್ದಾರೆ.





