ಮಾಂಟ್ರಾಡಿ ಗ್ರಾಮದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ

Picture of Namma Bedra

Namma Bedra

Bureau Report

ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ ಈ ಉರಿಬಿಸಿಲಿನಲ್ಲಿ ಜಾನುವಾರುಗಳಿಗೆ ಮತ್ತು ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುತ್ತದೆ ಜಾನುವಾರುಗಳು ಕುಡಿಯುವ ನೀರು ಸಿಗದೇ ಒದ್ದಾಡುವ ಪರಿಸ್ಥಿತಿಯು ಬರುತ್ತದೆ
ಇದನ್ನು ಮನಗಂಡ ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದ ಪಂಚಾಯತ್ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಕಡೆಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಮಾಡಿದ್ದಾರೆ.
ನೆಲ್ಲಿಕಾರು ಪಂಚಾಯತ್ ಸದಸ್ಯರ ಈ ಕೆಲಸ ಶ್ಲಾಘನೀಯವಾಗಿದ್ದು ವ್ಯಾಪಕ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಇದು ಮಾದರಿಯೂ ಆಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top