ಕರಾವಳಿ ಕೇಸರಿ ಟ್ರಸ್ಟ್,ಬೆದ್ರ ಹಾಗೂ ಕರಾವಳಿ ಕೇಸರಿ ಮಹಿಳಾ ಘಟಕ,ದರೆಗುಡ್ಡೆ ಇದರ ಹದಿನಾಲ್ಕನೇ ವರ್ಷದ ವಾರ್ಷಿಕೋತ್ಸವ ಹಾಗೂ ಆರನೇ ವರ್ಷದ ಶನೀಶ್ವರ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉದ್ಯಮಿ, ರುದ್ರಾಂಶ ಕನ್ಸ್ಟ್ರಕ್ಷನ್ಸ್ ಮಾಲಕ ಅಜಯ್ ಶೆಟ್ಟಿ ಅವರಿಗೆ ‘ಉದ್ಯಮ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಧಾರ್ಮಿಕ ಸಭೆಯನ್ನು ನ್ಯಾಯವಾದಿ ಶರತ್ ಶೆಟ್ಟಿ ಅವರು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಹಾಗೂ ಬೆಳ್ತಂಗಡಿಯ ಕಿರಣ್ ಚಂದ್ರ ಪುಷ್ಪಗಿರಿ ಅವರನ್ನು ‘ಸಮಾಜ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ರಾಜ್ಯ ಫೆಡರೇಶನ್ ಆಫ್ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ,ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ, ಹಿಂದೂ ಜಾಗರಣ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ,ಉದ್ಯಮಿ ಜಯಪ್ರಕಾಶ್, ಅಸ್ರಣ್ಣರಾದ ವೇ.ಮೂ.ನಾಗರಾಜ ಭಟ್ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಕರಾವಳಿ ಕೇಸರಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಸದಾನಂದ ಶೆಟ್ಟಿ, ಗೌರವಾಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು,ಸ್ಥಾಪಕಾಧ್ಯಕ್ಷ ಸಮಿತ್ ರಾಜ್ ದರೆಗುಡ್ಡೆ,ಮಹಿಳಾ ಘಟಕದ ಅಧ್ಯಕ್ಷೆ ಬೇಬಿ ಚಿದಾನಂದ ಕುಕ್ಯಾನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರಮಟ್ಟದ ಕ್ರೀಡಾಪಟು ಅನ್ವಿತ ಪಿ.ಪೂಜಾರಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಿತ್ ರಾಜ್ ಅವರು ಸ್ವಾಗತಿಸಿದರು. ರಾಮ್ ಕುಮಾರ್ ಮಾರ್ನಾಡ್ ಹಾಗೂ ಗಣೇಶ್ ಬಿ.ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.










