ಪುತ್ತಿಗೆ: ಮಹಿಳೆಯ ಸಂಶಯಾಸ್ಪದ ಸಾವು

Picture of Namma Bedra

Namma Bedra

Bureau Report

ಮೂಡುಬಿದಿರೆ ಸಮೀಪದ ಪುತ್ತಿಗೆಯ ಪ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ವಿವಾಹಿತ ಮಹಿಳೆಯೋರ್ವರು ಬಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದ್ದರೂ ಆ ಸಾವಿನ ಬಗ್ಗೆ ಸಂಶಯಗಳು ವ್ಯಕ್ತವಾಗುತ್ತಿದೆ.
ಲ್ಯಾಂಡ್ ಬ್ರೋಕರ್ ದಿನೇಶ್ ಎಂಬವರ ಪತ್ನಿ ಕವಿತಾ ಮೃತಪಟ್ಟವರು.
ದಂಪತಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಪುತ್ತಿಗೆಯ ಸಿಂಚನಾ ಅಪಾರ್ಟ್ಮೆಂಟಲ್ಲಿ ವಾಸವಾಗಿದ್ದರು.
ಎರಡು ದಿನದ ಹಿಂದೆ ಮನೆಯಲ್ಲಿ ಕುಸಿದು ಬಿದ್ದು ತಲೆಗೆ ಗಾಯಗೊಂಡಿದ್ದ ಕವಿತಾ ಅವರನ್ನು ದಿನೇಶ್ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರೆನ್ನಲಾಗಿದ್ದು ಅಲ್ಲಿಂದ ಮೂಡುಬಿದಿರೆಯ ಆಳ್ವಾಸ್ ಗೆ ಕರೆತಂದು ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಈದಿನ ಮೃತಪಟ್ಟಿದ್ದಾರೆ.
ಈ ಸಾವಿನ ಕುರಿತು ಕವಿತಾ ಮನೆಮಂದಿ ಸಂಶಯ ವ್ಯಕ್ತಪಡಿಸಿದ್ದು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರು ಪ್ರಕರಣ ದಾಖಲಿಸಿಕೊಂಡಿದ್ದು ಈ ಶಂಕಾಸ್ಪದ ಸಾವಿನ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top