ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ. *ವೈದ್ಯರು, ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Picture of Namma Bedra

Namma Bedra

Bureau Report

ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿರುವ ಮೂಡುಬಿದಿರೆಯ ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನೇತ್ರ ತಜ್ಞರಾದ ಡಾ.ಮಾಲಿನಿ ಬಂಗೇರ ಮತ್ತು ಡಾ.ಸ್ಮೃತಿ ಅವರನ್ನು ಸನ್ಮಾನಿಸಲಾಯಿತು.
ಮೂಡುಬಿದಿರೆ ಆಸುಪಾಸಿನ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.
ಮಹಿಳಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ ಮಹಿಳೆಯರ ಆರೋಗ್ಯ’ ಎಂಬ ವಿಷಯದ ಕುರಿತಾದ ಪೋಸ್ಟರ್ ರಚನಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಸಾದ್ ನೇತ್ರಾಲಯ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರ ಅಧ್ಯಕ್ಷತೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಸರಕಾರಿ ಆಸ್ಪತ್ರೆಯ ಕಣ್ಣಿನ ವೈದ್ಯೆ ಡಾ.ಮಾಲಿನಿ ಬಂಗೇರ ಹಾಗೂ ಮೂಡುಬಿದಿರೆ ಮಾವೇದಾಸ್ ಫುಡ್ಸ್ & ಸೀರಿಯಲ್ಸ್ ಪ್ರೈ.ಲಿ.ನ ಸಂಸ್ಥಾಪಕ ನಿರ್ದೇಶಕರಾದ ಶ್ರೀಮತಿ ಅನುಷಾ ಪ್ರಜ್ವಲ್ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಮೂಡುಬಿದಿರೆ ಪ್ರಸಾದ್ ನೇತ್ರಾಲಯದ ನಿರ್ದೇಶಕರಾದ ಡಾ.ಸ್ಮೃತಿ, ಡಾ.ವಿಕ್ರಮ್ ಜೈನ್ ಹಾಗೂ ಡಾ.ಹರೀಶ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿರಿಯ ನೇತ್ರತಜ್ಞ ಡಾ.ಸಿಬಿನ ಗಿರೀಶ್ ಹಾಗೂ ಆಡಳಿತಾಧಿಕಾರಿ ಮಾಧವ ಪೂಜಾರಿ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೀಮತಿ ದೀಕ್ಷಾ ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top