ಮೂಡುಬಿದಿರೆ: ಬಂಟರ ಮಹಿಳಾ ಘಟಕದ ವತಿಯಿಂದ ಮಹಿಳಾ ದಿನಾಚರಣೆ

Picture of Namma Bedra

Namma Bedra

Bureau Report

ಮೂಡುಬಿದಿರೆಯ ಬಂಟರ ಮಹಿಳಾ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ಹೊಟೆಲ್ ಪಂಚರತ್ನ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು.
‌‌ ಕಾರ್ಕಳ ಎಸ್.ವಿ.ಟಿ. ಮಹಿಳಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ‘ ಸಾಮಾಜಿಕ ಜೀವನದಲ್ಲಿ ಮಹಿಳೆಯರ ಪಾತ್ರ’ ದ ಕುರಿತು ಮಾತನಾಡಿದರು.
ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಶೋಭಾ ಎಸ್.ಹೆಗ್ಡೆ ಅವರು ಸ್ವಾಗತಿಸಿದರು. ಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯದರ್ಶಿ ಸಂಗೀತಾ ಶೆಟ್ಟಿ, ಕೋಶಾಧಿಕಾರಿ ಗೀತಾ ಪಿ.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
‌ ಮಹಿಳೆಯರಿಗಾಗಿ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top