ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ – ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Picture of Namma Bedra

Namma Bedra

Bureau Report

ಮೂಡುಬಿದಿರೆ: ಸಮಗ್ರವಾಗಿ ನವೀಕರಣಗೊಳ್ಳುತ್ತಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಎ. 26ರಿಂದ ಮೇ. 1ರವರೆಗೆ
ಅಷ್ಟಬಂಧ ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಜರಗಲಿದ್ದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಸ್ಥಾನದ ಸನ್ನಿಧಾನದಲ್ಲಿ ಮಾ. 29ರಂದು ಬಿಡುಗಡೆ ಮಾಡಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಧರ್ಮದರ್ಶಿ ಎ. ಜಿವಂಧರ್ ಕುಮಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ಶ್ರೀಪತಿ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮಾರೂರುಗುತ್ತು ಶಂಭು ಎನ್. ಶೆಟ್ಟಿ, ದೇವಸ್ಥಾನದ ಆಡಳಿತ ಮೊಕ್ತೇಸರ ಹೊಸಂಗಡಿ ಅರಮನೆ ಸಂಪತ್ ಕುಮಾರ್ ಶೆಟ್ಟಿ, ಹೊಸಂಗಡಿ ಅರಮನೆ ಸುಕುಮಾರ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟರಾಜ ಆಸ್ರಣ್ಣ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ವೇದಮೂರ್ತಿ ರಾಮದಾಸ ಆಸ್ರಣ್ಣ, ಪ್ರಸನ್ನ ಆಸ್ರಣ್ಣ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ, ಉಭಯ ಸಮಿತಿಗಳ ಪದಾಧಿಕಾರಿಗಳಾದ ಶ್ರೀಧರ ಕೆ. ಕೆಮ್ಮಾರ್, ಶಂಕರ ಎ. ಕೋಟ್ಯಾನ್, ಸುನಿಲ್ ಕುಮಾರ್ ಶೆಟ್ಟಿ, ಸುಶಾಂತ್ ಕರ್ಕೇರಾ, ಪುಚ್ಚಮೊಗರು ಬಾವಗುತ್ತು ಪ್ರದೀಪ್ ಚಂದ್ರ ಜೈನ್, ಸಂಗಡಿಗುತ್ತು ಜಯರಾಜ ಬಲ್ಲವ, ಹೊಸಮನೆಗುತ್ತು ದಿಲೀಪ್ ಕುಮಾರ್ ಶೆಟ್ಟಿ, ಮಿತ್ತಬೆಟ್ಟುಗುತ್ತು ಸುಧಾಕರ ಶೆಟ್ಟಿ, ಪೆರಿಂಜೆ ಬಡಕೋಡಿ ಶ್ರೀಪತಿ ಭಟ್, ಸ್ವಾಗತ ಸಮಿತಿ ಅಧ್ಯಕ್ಷ ರಮೇಶ್ ಎಸ್. ಶೆಟ್ಟಿ ಮಾರ್ನಾಡ್, ಸಂಚಾಲಕ ಸುರೇಶ್ ಕೋಟ್ಯಾನ್, ಕಲಶ ಸಮಿತಿ ಅಧ್ಯಕ್ಷ ಜಿ.ಕೆ. ಭಟ್ ಕಲ್ಲಬೆಟ್ಟು, ಗಣೇಶ್ ರಾವ್ ಲಾಡಿ ಮತ್ತಿತರರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top