ಮೂಡುಬಿದಿರೆ: ರೋಟರಿ ವಿದ್ಯಾಸಂಸ್ಥೆಗಳು, ಮೂಡುಬಿದಿರೆ ಸಹಯೋಗದಲ್ಲಿ ಶ್ರೀ ಶಾರದಾ ನಾಟ್ಯಾಲಯ ಮೂಡುಬಿದಿರೆ ನಡೆಸುವ ‘ಚಿಗುರು ಹಬ್ಬ – ಮಕ್ಕಳ ಬೇಸಿಗೆ ಶಿಬಿರ 2026’*ಕ್ಕೆ ರೋಟರಿ ಶಾಲೆಯ ಸಭಾಭವನದಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮದ
ಉದ್ಘಾಟನೆಯನ್ನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಎಜುಕೇಷನ್ ಸೊಸೈಟಿ ಅಧ್ಯಕ್ಷರಾದ ರೋ. ನಾರಾಯಣ್ ಪಿ.ಎಂ. ಅವರು ದೀಪ ಬೆಳಗಿಸಿ ಶಿಬಿರವನ್ನು ಅಧಿಕೃತವಾಗಿ ಉದ್ಘಾಟಿಸಿದರು ಮತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಪ್ರಸಿದ್ಧ ಧಾರ್ಮಿಕ ಉಪನ್ಯಾಸಕರಾದ ಶ್ರೀ ಮುನಿರಾಜ್ ರೆಂಜಾಳ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಇಂತಹ ಶಿಬಿರಗಳು ಪೂರಕ. ಮಕ್ಕಳನ್ನು ಕೇವಲ ಅಂಕಗಳಿಗೆ ಪೀಡಿಸದೆ ಅವರಲ್ಲಿನ ಪ್ರತಿಭೆ ಹೊರತರಬೇಕೆಂದು ನುಡಿದರು.ಕಾರ್ಯಕ್ರಮದಲ್ಲಿ ರೋಟರಿ ಆಂಗ್ಲ ಮಾಧ್ಯಮದ ಸಂಚಾಲಕರಾದ ರೊ.ಪ್ರವೀಣ್‌ಚಂದ್ರ ಜೈನ್ , ಪ್ರಸಿದ್ಧ ಭಾಗವತರಾದ ಶ್ರೀ ರವಿಚಂದ್ರ ಕನ್ನಡಿಕಟ್ಟೆ ಹಾಗೂ ತಾಂತ್ರಿಕ ಸಲಹೆಗಾರರಾದ ಶ್ರೀ ಶಿವಪ್ರಸಾದ್ ಹೆಗ್ಡೆ ಶ್ರೀ ಶಾರದಾ ನಾಟ್ಯಾಲಯದ ಅಧ್ಯಕ್ಷರಾದ ಶ್ರೀ ಶಂಕರ್ ಕುಲಾಲ್, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ತಿಲಕಾ ಅನಂತವೀರ್ ಜೈನ್ ಉಪಸ್ಥಿತರಿದ್ದರು.











