ಮಾರೂರು ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಸಮರ್ಥರಾಗಿ ಕಾರ್ಯನಿರ್ವಹಿಸಿ ಯಶಸ್ಸಿಗೆ ಸಹಕರಿಸಿದ ಶಂಕರ್ ಎ.ಕೋಟ್ಯಾನ್ ಅವರನ್ನು ಸಮಿತಿಯ ಅಧ್ಯಕ್ಷರಾದ ಪಡ್ಯಾರಬೆಟ್ಟ ಜೀವಂಧರ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶಂಭು ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ಸುಚರಿತ ಶೆಟ್ಟಿ,ಕೆ.ಶ್ರೀಪತಿ ಭಟ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





