ವಿಶ್ವದ ನಾನಾ ದೇಶಗಳಲ್ಲಿ ತನ್ನದೇ ಆದ ಹೆಸರು ಗಳಿಸಿಕೊಂಡಿರುವ ಬನ್ನಡ್ಕದ ಎಸ್.ಕೆ.ಎಫ್.ಸಂಸ್ಥೆಯ ವತಿಯಿಂದ ನೂತನವಾಗಿ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿಯ ಗುಡ್ಡೆಯಂಗಡಿಯಲ್ಲಿ ನಿರ್ಮಾಣಗೊಂಡಿರುವ ಎಸ್.ಕೆ.ಎಫ್. ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ನ ಉದ್ಘಾಟನೆ ಮೇ.25 ರಂದು ನಡೆಯಲಿದೆ ಎಂದು ಡಾ.ಜಿ.ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರೂ, ಎಸ್.ಕೆ.ಎಫ್. ಎಲಿಕ್ಸರ್ ಇಂಡಿಯಾ ಪ್ರೈ.ಲಿ.ನ ಅಧ್ಯಕ್ಷರಾದ ಡಾ.ಜಿ.ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ.
ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವ ಅವರು ನೂತನ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಮೊಳಹಳ್ಳಿಯ ಉದ್ಯಮಿ ಎಂ.ದಿನೇಶ್ ಹೆಗ್ಡೆ, ಕಾರ್ಕಳ ಪದ್ಮಗೋಪಾಲ್ ಎಜುಕೇಶನ್ ಸೆಂಟರ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಎಸ್.ಎಸ್.ನಾಯಕ್, ಯಡಾಡಿ- ಮತ್ಯಾಡಿಯ ಪ್ರಥಮ ದರ್ಜೆ ಗುತ್ತಿಗೆದಾರರಾದ ಬಿ.ಅರುಣ್ ಕುಮಾರ್ ಹೆಗ್ಡೆ,ಮೊಳಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ಹಾಗೂ ಕುಂದಾಪುರದ ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ.
ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದವರು ತಿಳಿಸಿದ್ದಾರೆ.






