ಮೂಡುಬಿದಿರೆ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು

Picture of Namma Bedra

Namma Bedra

Bureau Report

ಶೀಟು ಹಾಕುವ ಕೆಲಸ ಮಾಡುತ್ತಿದ್ದಾಗ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೂಡುಬಿದಿರೆಯ ಕಡಪಳ್ಳದಲ್ಲಿಂದು ನಡೆದಿದೆ.
ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಅವರ ಪುತ್ರ ಶರ್ಯ ಎಸ್.ಆಚಾರ್ಯ ( 17) ಮೃತಪಟ್ಟ ಯುವಕ.
ಕಡಪಳ್ಳ ಗಾಂಧಿನಗರದಲ್ಲಿರುವ ರಾಯಲ್ ಪ್ಯಾರಡೈಸ್ ಎಂಬ ಕಟ್ಟಡದಲ್ಲಿ ನಾಲ್ಕನೇ ಮಹಡಿಯ ಮೇಲೆ ಶೀಟ್ ಹಾಕುತ್ತಿರುವಾಗ ಈ ದುರಂತ ಸಂಭವಿಸಿದೆ.


ಕೆಳಕ್ಕೆ ಬಿದ್ದ ಶರ್ಯ ಅವರನ್ನು ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಕಟ್ಟಡದ ಗುತ್ತಿಗೆದಾರ ಪ್ರವೀಣ್ ಹಾಗೂ ಮಾಲಕರಾದ ನೋರ್ಟ್ ಶಾಬಾ ರೇಗೋ ಅವರು ಕೆಲಸ ಮಾಡುವಾಗ ಸರಿಯಾದ ಸುರಕ್ಷತಾ ಸಾಮಾಗ್ರಿಗಳನ್ನು ನೀಡದಿರುವುದೇ ಈ ದುರಂತಕ್ಕೆ ಕಾರಣವೆನ್ನಲಾಗಿದ್ದು ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top