ಮಾಂಟ್ರಾಡಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ನೋಟ್ ಪುಸ್ತಕ ನೀಡಿದ ಹಳೆವಿದ್ಯಾರ್ಥಿ ಡಾ.ಯಶೋಧರ್

Picture of Namma Bedra

Namma Bedra

Bureau Report

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಾಂಟ್ರಾಡಿ ಇಲ್ಲಿನ ಹಳೆ ವಿದ್ಯಾರ್ಥಿ, ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರೂ ಹಾಗೂ ಇರ್ವತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಖ್ಯಾತ ಚರ್ಮರೋಗ ತಜ್ಞರಾದ ಡಾ.ಯಶೋಧರ್ ಅವರು ತಾನು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡುವಂತೆ ಈ ವರ್ಷವೂ ಉಚಿತವಾಗಿ ಬ್ಯಾಗ್, ನೋಟ್ ಪುಸ್ತಕ ಹಾಗೂ ಇತರ ಕಲಿಕಾ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಾರೆ.


ಯಶೋಧರ್ ಅವರ ಅಮ್ಮ ಶ್ರೀಮತಿ ರುಕ್ಮಿಣಿ ಅಮ್ಮ, ಪತ್ನಿ ಯಶವಂತಿ ಹಾಗೂ ಸಹೋದರ ಶಶಿಧರ ಎಂ.ಅವರ ಉಪಸ್ಥಿತಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾಯಿತು.
ಎಸ್.ಡಿ.ಎಂ.ಸಿ.ಅಧ್ಯಕ್ಷ ರಾಜೇಶ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಧನಂಜಯ ಆಳ್ವ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಂಟ್ರಾಡಿ ಘಟಕದ ಅಧ್ಯಕ್ಷ ವಿದೇಶ್ ಕೋಟ್ಯಾನ್, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಾಣಿಶ್ರೀ ಅವರು ಸ್ವಾಗತಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top