ಆರೋಗ್ಯ ಸಚಿವರಾದ ಯು.ಟಿ.ಖಾದರ್ ಅವರು ನಾಳೆ ಬೆಳಿಗ್ಗೆ ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10-30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅವರು ಬಳಿಕ ಶಿರ್ತಾಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆಂದು ತಿಳಿದು ಬಂದಿದೆ.
ಶಿರ್ತಾಡಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಡರೋಗಿಗಳಾಗುತ್ತಿರುವ ಸಮಸ್ಯೆಯ ಬಗ್ಗೆ ‘ ನಮ್ಮ ಬೆದ್ರ’ ಸಹಿತ ಕೆಲವು ಮಾಧ್ಯಮಗಳು ವರದಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಅವರು ಶಿರ್ತಾಡಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆಂದು ತಿಳಿದು ಬಂದಿದೆ.






