ತಮಿಳುನಾಡಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೌತ್ ಝೋನ್ ಫ್ಲೋರ್ ಬಾಲ್ ಚಾಂಪಿಯನ್ ಶಿಪ್ ನ ಮುಕ್ತ ವಿಭಾಗದಲ್ಲಿ ವಾಲ್ಪಾಡಿಯ ವಿಕ್ರೀತಾ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಅಂಡರ್- 19 ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಈಕೆ ಒಂದು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ಪಡೆದು ಸಾಧನೆ ಮಾಡುವ ಮೂಲಕ ಮತ್ತೊಮ್ಮೆ ಗಮನಸೆಳೆದಿದ್ದಾರೆ.
ವಾಲ್ಪಾಡಿ ಜೋಗೊಟ್ಟುವಿನ ಹರೀಶ್ ಪೂಜಾರಿ-ರಾಜೀವಿ ದಂಪತಿಯ ಪುತ್ರಿಯಾಗಿರುವ ಈಕೆ ಮೂಡುಬಿದಿರೆ ಮಹಾವೀರ ಕಾಲೇಜಿನ ವಿದ್ಯಾರ್ಥಿನಿ.
ಈಕೆಯ ಸಾಧನೆಯನ್ನು ಗುರುತಿಸಿ ಇತ್ತೀಚೆಗೆ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಫ್ರೆಂಡ್ಸ್ ವಾಲ್ಪಾಡಿ ಆಶ್ರಯದಲ್ಲಿ ನಡೆದ ಕ್ರಿಕೆಟ್ ಪಂದ್ಯಾಕೂಟದ ಸಂದರ್ಭದಲ್ಲಿ ಸನ್ಮಾನಿಸಲಾಗಿತ್ತು.






