ಮೂಡುಬಿದಿರೆ ಪ್ರೆಸ್ ಕ್ಲಬ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ನಡೆದ ‘ ಮಾಧ್ಯಮ ಹಬ್ಬ’ ಕಾರ್ಯಕ್ರಮದಲ್ಲಿ ಟಿವಿ 9 ಮಡಿಕೇರಿಯ ವೀಡಿಯೋ ಜರ್ನಲಿಸ್ಟ್ ,ಮೂಡುಬಿದಿರೆ ಬಿರಾವಿನ ನವೀನ್ ಸುವರ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೆಸ್ ಕ್ಲಬ್ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಸಚಿವ ಕೆ.ಅಭಯಚಂದ್ರ ಅವರು ಉದ್ಘಾಟಿಸಿದರು.



ಮಂಗಳೂರಿನ ಫೊರೆನ್ಸಿಕ್ ಇನ್ವೆಸ್ಟಿಗೇಟರ್ ಶ್ರವಣ್ ಕುಮಾರ್ ಯು.ಕೆ.ಅವರು ‘ ಎ.ಐ.ಯಿಂದ ಪತ್ರಕರ್ತರಿಗಿರುವ ಅವಕಾಶಗಳು ಮತ್ತು ಸವಾಲುಗಳು’ ಎನ್ನುವ ವಿಷಯದಲ್ಲಿ ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸದಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ರಾಜ್ಯ ಪತ್ರಕರ್ತರ ಸಂಘದ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಬಿಜೆಪಿ ಮುಖಂಡ ಸುದರ್ಶನ ಎಂ.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಸನ್ಮತ್ ಎಸ್.ಆಚಾರ್ಯ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ ಅಮೋಘ್ ಹೆಗ್ಡೆ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್ ಸ್ವಾಗತಿಸಿ ಪ್ರೆಸ್ ಕ್ಲಬ್ ಉಪಾಧ್ಯಕ್ಷ ಹರೀಶ್ ಕೆ.ಆದೂರು ವಂದಿಸಿದರು. ಕೋಶಾಧಿಕಾರಿ ಪ್ರಸನ್ನ ಹೆಗ್ಡೆ ಸನ್ಮಾನಪತ್ರ ವಾಚಿಸಿದರು.ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಸಂಘದ ಕಾರ್ಯದರ್ಶಿ ಜೈಸನ್ ತಾಕೊಡೆ, ಸದಸ್ಯರಾದ ಯಶೋಧರ ಬಂಗೇರ,ರಾಘವೇಂದ್ರ ಶೆಟ್ಟಿ, ಶರತ್ ದೇವಾಡಿಗ, ಪುನೀತ್,ಪ್ರೆಸ್ ಕ್ಲಬ್ ನಿರ್ವಾಹಕ ಪ್ರಸನ್ನ ಸಚ್ಚರಿಪೇಟೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






