ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ರವರ ಮಾರ್ಗದರ್ಶನಂತೆ, ಕ್ಷೇತ್ರದ ಮಾಜಿ ಸಚಿವರಾದ ಕೆ ಅಭಯ್ ಚಂದ್ರ ಜೈನ್ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಡೆನ್ನಿಸ್ ಡಿಸಿಲ್ವಾ ಅವರ ಶಿಫಾರಸ್ಸಿನಂತೆ ಮುಂಬರುವ ಚುನಾವಣೆ ಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು, ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರು ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರಕ್ಕೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಎಚ್ ವಸಂತ ಬರ್ನಾಡ್ ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ.
ಕಾಲೇಜು ಜೀವನದಿಂದಲೂ ಕೂಡ ನಾಯಕತ್ವದ ಗುಣವನ್ನು ಹೊಂದಿದವರು, ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನ ಕಾಂಗ್ರೆಸ್ ಕೋಶಾಧಿಕಾರಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್ಸಿನ ಉಪಾಧ್ಯಕ್ಷರಾಗಿ, ಸುಮಾರು 12 ವರ್ಷ ನಿರಂತರವಾಗಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ತಾಲೂಕು ರಾಜೀವ್ ಗಾಂಧಿ ಪಂಚಾಯತ್ ಸಂಘಟನ್ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಯ ಕೋ ಆರ್ಡಿನೇಟರ್ ಆಗಿ ಕುಂದಾಪುರ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ಪ್ರಸ್ತುತ ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆದ ವಿವಿಧ ಉಪ ಚುನಾವಣೆಯಲ್ಲಿ ಸಹಾಯಕ ವೀಕ್ಷಕರಾಗಿ ಸೇವೆ ಸಲ್ಲಿಸಿದ ಅನುಭವ ಇವರದ್ದು.
ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ನಡೆದ ಚುನಾವಣೆಗಳಲ್ಲಿ ಚುನಾವಣೆಯ ಕಂಟ್ರೋಲ್ ರೂಮಿನ ಜವಾಬ್ದಾರಿಯನ್ನು ಹೊತ್ತುಕೊಂಡು ಚುನಾವಣೆ ಪ್ರಕ್ರಿಯೆಗಳನ್ನು ಸುಸೂತ್ರವಾಗಿ ನಡೆಸಿದ ಅನುಭವ ಇವರದ್ದು.
ಇವರಿಗೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಜೈನ್ ರವರು ಅಭಿನಂದನೆ ತಿಳಿಸುತ್ತಾರೆ.






