ಶಿರ್ತಾಡಿ ಆಸ್ಪತ್ರೆ ಸಿಬ್ಬಂದಿಗಳಿಗೆ ಬೀಳ್ಕೊಡುಗೆ

Picture of Namma Bedra

Namma Bedra

Bureau Report

ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸುರಕ್ಷಾ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಮೂವರು ಮಹಿಳಾ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಹಿರಿಯ ಸುರಕ್ಷಾ ಅಧಿಕಾರಿಯಾಗಿ ಪದೋನ್ನತಿ ಹೊಂದಿ ಬೆಳುವಾಯಿಗೆ ವರ್ಗಾವಣೆಗೊಂಡಿರುವ ನಿವೇದಿತಾ, ಉಳ್ಳಾಲಕ್ಕೆ ವರ್ಗಾವಣೆಗೊಂಡಿರುವ ಪ್ರತಿಭಾ ಹಾಗೂ ಕಟೀಲಿಗೆ ವರ್ಗಾವಣೆಗೊಂಡಿರುವ ಅಕ್ಷತಾ ಅವರನ್ನು ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಮೂವರು ಅಧಿಕಾರಿಗಳು ಶಿರ್ತಾಡಿ ಆರೋಗ್ಯ ಕೇಂದ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದರು.
ವೈದ್ಯಾಧಿಕಾರಿಗಳು ಡಾ.ಭರತ್,ಡಾ.ಹಾದಿಯಾ, ಸುನಂದ,ಚಂದ್ರಿಕಾ, ಪುಷ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top