ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಶಿರ್ತಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕುಮಾರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಶಿರ್ತಾಡಿ ಪಂಚಾಯತ್ ಸದಸ್ಯರಾಗಿ ಕಳೆದ ಎರಡೂವರೆ ದಶಕಗಳಿಂದ ಶಿರ್ತಾಡಿ ಪರಿಸರದಲ್ಲಿ ಜನಪ್ರಿಯರಾಗಿರುವ ಇವರು ಮಂಗಳೂರು ಎಪಿಎಂಸಿ ಅಧ್ಯಕ್ಷರಾಗಿ,ಕಲ್ಲಬೆಟ್ಟು ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಸ್ತುತ ಅಧ್ಯಕ್ಷರಾಗಿರುವ ವಲೇರಿಯನ್ ಸಿಕ್ವೇರ ಅವರು ಕಳೆದ ಎಂಟು ವರ್ಷಗಳಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ನೂತನ ಅಧ್ಯಕ್ಷರ ನೇಮಕಾತಿ ಪತ್ರ ಇನ್ನಷ್ಟೇ ಬರಬೇಕಿದ್ದು ನಾಳೆ ಬರುವ ಸಾಧ್ಯತೆಯಿದೆ.
