ಕಳೆದ ಇಪ್ಪತ್ತೈದು ವರ್ಷಗಳ ಕಂಬಳ ಕ್ಷೇತ್ರದ ಸಾಧನೆಗಾಗಿ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಅವರನ್ನು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಹಿತ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
