ಶಿರ್ತಾಡಿ ಸೊಸೈಟಿಗೆ ಸಹಕಾರಿ ಸನ್ಮಾನ

Picture of Namma Bedra

Namma Bedra

Bureau Report

ಸಹಕಾರಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಶಿರ್ತಾಡಿ ಕೃಷಿಪತ್ತಿನ ಸಹಕಾರಿ ಸಂಘವನ್ನು ಮಂಗಳೂರಿನಲ್ಲಿಂದು ನಡೆದ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಎಸ್.ಪ್ರವೀಣ್ ಕುಮಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿ ವಿಮಲಾ ಜೆ.ಅವರನ್ನು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.
ದೇವಿಪ್ರಸಾದ್ ಶೆಟ್ಟಿ, ಭಾಸ್ಕರ ಕೋಟ್ಯಾನ್, ಶಿರ್ತಾಡಿ ಸಂಘದ ಉಪಾಧ್ಯಕ್ಷ ಚಿಂತನ್ ಲೋಬೋ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top