ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶಿರ್ತಾಡಿ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ನೀಡಿರುವ ನೇಮಕಾತಿ ಆದೇಶ ಪ್ರತಿಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಅವರು ಪ್ರವೀಣ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಕೆ.ಪಿ.ಸಿ.ಸಿ. ಕಾರ್ಯದರ್ಶಿ ಮಿಥುನ್ ರೈ, ಮಮತಾ ಗಟ್ಟಿ ಉಪಸ್ಥಿತರಿದ್ದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರವೀಣ್ ಕುಮಾರ್ ಅವರು ಮಾಜಿ ಸಚಿವ ಕೆ.ಅಭಯಚಂದ್ರ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು.
ಪ್ರವೀಣ್ ಮೆಂಡೋನ್ಸ, ಸೂರಜ್ ಜೈನ್ ಈ ಸಂದರ್ಭದಲ್ಲಿದ್ದರು.