ಮೂಡುಬಿದಿರೆ: ಬಂಟರ ಸಂಘ, ಯುವ ಬಂಟರ ಸಂಘದ ವತಿಯಿಂದ ಬ್ಯಾರಿಕೇಡ್ ಹಸ್ತಾಂತರ

Picture of Namma Bedra

Namma Bedra

Bureau Report

‌‌‌ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ಮೂಡುಬಿದಿರೆ ಬಂಟರ ಸಂಘ ಹಾಗೂ ಯುವ ಬಂಟರ ಸಂಘದ ವತಿಯಿಂದ ಬ್ಯಾರಿಕೇಡ್ ಗಳನ್ನು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಮೂಡುಬಿದಿರೆ ಇನ್ಸ್ಪೆಕ್ಟರ್ ರಾಜೇಂದ್ರ ಬಿ.ಅವರು ‘ಮೂಡುಬಿದಿರೆ ಪಟ್ಟಣದಲ್ಲಿ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಬ್ಯಾರಿಕೇಡ್ ಗಳು ಸಹಕಾರಿಯಾಗಲಿದೆ,ಪೊಲೀಸ್ ಇಲಾಖೆಯ ಕಾರ್ಯಕ್ಕೆ ಪೂರಕವಾಗಿ ಸಂಘ ಸಂಸ್ಥೆಗಳು ಕೈಜೋಡಿಸಿ ಇಂತಹ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ’ ಎಂದರಲ್ಲದೆ ಬ್ಯಾರಿಕೇಡ್ ಗಳನ್ನು ನೀಡಿದ ಬಂಟರ,ಯುವ ಬಂಟರ ಸಂಘಕ್ಕೆ ಕೃತಜ್ಞತೆ ಸಲ್ಲಿಸಿದರು.
ಪಿಎಸ್ಸೈ ಪ್ರತಿಭಾ, ಪಿಎಸ್ಸೈ ಕೃಷ್ಣಪ್ಪ ಹಾಗೂ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯದರ್ಶಿ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಚೇತನ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪುರುಷೋತ್ತಮ ಶೆಟ್ಟಿ, ಯುವ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ, ಕಾರ್ಯದರ್ಶಿ ರಮೇಶ್ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top